ಬಳ್ಳಾರಿ: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾನೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲು, ಸೋಮಶೇಖರ್ ರೆಡ್ಡಿ, ಆಲಿಖಾನ್, ದಮ್ಮೂರು ಶೇಖರ್ ಸೇರಿದಂತೆ 11 ಜನರ ವಿರುದ್ಧ ಕೇಸು ದಾಖಲಾಗಿದೆ.
ವಾಲ್ಮೀಕಿ ಪ್ರತಿಮೆ ಅನಾವರಣದ ಕಾರ್ಯಕ್ರಮದ ಬ್ಯಾನರ್ ಹರಿದ ವಿಚಾರಕ್ಕೆ ಕೇಸು ದಾಖಲಾಗಿದೆ. ಜನಾರ್ದನ ರೆಡ್ಡಿ, ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, ಜನಾರ್ದನ ರೆಡ್ಡಿ ಬ್ಯಾನರ್ ಹರಿಸಿದ್ದಾರೆ ಎಂದು ಬಳ್ಳಾರಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜನಾರ್ದನ ರೆಡ್ಡಿ ನಿವಾಸದಲ್ಲೇ ಶ್ರೀರಾಮುಲು ಬೀಡು ಬಿಟ್ಟಿದ್ದು ಅವರೊಂದಿಗೆ ಅಪಾರ ಬೆಂಬಲಿಗರು ಆಗಮಿಸಿದ್ದಾರೆ.ನಗರದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.




