ಯಾದಗಿರಿ : ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಶಹಾಪುರ ಸಿಡಿಪಿಒ ಮಲ್ಲಣ್ಣ ಉಮಾಪತಿ ದೂರಿನಡಿ ಎಫ್ ಐಆರ್ ದಾಖಲಾಗಿದೆ. ಅಪ್ರಾಪ್ತ ಇಂದು ರಾಜಸ್ಥಾನದಲ್ಲಿ ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆ ಜೊತೆಗೆ ಅನುಚಿತ ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಲ್ಲಿಕಾರ್ಜುನ ಮುತ್ಯಾ ವಿರುದ್ದ ಮಕ್ಕಳ ಆಯೋಗದಿಂದ ದೂರು ದಾಖಲು!
ಶಹಾಪುರ ತಾಲೂಕಿನ ಮಹಲ್ ರೋಜಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗಿರುವ ವಿಡಿಯೋ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ.
ವೈರಲ್ ವಿಡಿಯೋವನ್ನು ಪರಿಶೀಲಿಸಿ, ಕೈಗೊಂಡ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆಯೋಗ ಪತ್ರ ರವಾನಿಸಿದೆ.




