Ad imageAd image

ನಟ ರಕ್ಷಿತ್ ಶೆಟ್ಟಿ ವಿರುದ್ಧ ‘FIR’ ದಾಖಲು..!

Bharath Vaibhav
ನಟ ರಕ್ಷಿತ್ ಶೆಟ್ಟಿ ವಿರುದ್ಧ ‘FIR’ ದಾಖಲು..!
rakshit shetty
WhatsApp Group Join Now
Telegram Group Join Now

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಹಿನ್ನೆಲೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎಂ ಆರ್ ಟಿ ಮ್ಯೂಸಿಕ್ ಪಾಲುದಾರ ನವೀನ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ನ್ಯಾಯ ಎಲ್ಲಿದೆ ಮತ್ತು ಗಾಳಿಮಾತು ಎಂಬ 2 ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿದ ಹಿನ್ನೆಲೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ’ ಟೈಟಲ್ ಸಾಂಗ್ ಹಾಗೂ ಗಾಳಿಮಾತು ಚಿತ್ರದ ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ ಚಿತ್ರದ ಹಾಡುಗಳನ್ನು ಕದ್ದಿರುವ ಆರೋಪ ಕೇಳಿಬಂದಿದೆ.

‘ಬ್ಯಾಚುಲರ್ ಪಾರ್ಟಿ’ ಚಿತ್ರವನ್ನು ಅಭಿಜಿತ್ ಮಹೇಶ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಪರಂವಾ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿದ್ದಾರೆ . ಇದರಲ್ಲಿ ದಿಗಂತ್ , ಅಚ್ಯುತ್ ಕುಮಾರ್ ಮತ್ತು ಯೋಗೇಶ್ ಪ್ರಮುಖ ಪಾತ್ರಗಳಲ್ಲಿನಟಿಸಿದ್ದಾರೆ . ಸಂಗೀತವನ್ನು ಅರ್ಜುನ್ ರಾಮು ಸಂಯೋಜಿಸಿದ್ದಾರೆ, ಛಾಯಾಗ್ರಹಣ ಮತ್ತು ಸಂಕಲನವನ್ನು ಅರವಿಂದ್ ಎಸ್. ಕಶ್ಯಪ್ ಮತ್ತು ಅಭಿಷೇಕ್ ಎಂ ಮಾಡಿದ್ದಾರೆ. ಬ್ಯಾಚುಲರ್ ಪಾರ್ಟಿ 26 ಜನವರಿ 2024 ರಲ್ಲಿ ಬಿಡುಗಡೆಯಾಗಿತ್ತು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!