ಬೆಂಗಳೂರು: ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ರಾಜ್ಯ ಬಿಜೆಪಿಯ ಎಕ್ಸ್ ಖಾತೆಯಲ್ಲಿ ಮಾಡಿದಂತ ಪೋಸ್ಟ್ ವಿರುದ್ಧ ಕೇಳಿ ಬಂತ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ FIR ದಾಖಲಾಗಿದೆ.
ಇಂದು ರಾಜ್ಯ ಚುನಾವಣಾ ಆಯೋಗದಿಂದ ಎಕ್ಸ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಅದರಲ್ಲಿ ದಿನಾಂಕ 19.04.24 ರಂದು ಬಿಜೆಪಿ ಕರ್ನಾಟಕ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬೆಂಗಳೂರಿನ ಎಫ್‌ಎಸ್ಟಿ ಎಫ್‌ಐಆರ್ ದಾಖಲಿಸಿದೆ ಎಂದು ತಿಳಿಸಿದೆ.
ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದ ಮೇಲೆ ಮಲ್ಲೇಶ್ವರಂ ಪಿಎಸ್ನಲ್ಲಿ ಎಫ್‌ಐಆರ್ ಸಂಖ್ಯೆ 60/2024 ಅನ್ನು ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 125 ಮತ್ತು ಐಪಿಸಿಯ 505, 153 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಹೇಳಿದೆ.