ಬೆಂಗಳೂರಿನ : ರಾತ್ರಿ ಅವಧಿಗೆ ಮೀರಿ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಮಾಲೀಕತ್ವದ ಬೆಂಗಳೂರಿನ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ.
ತಡರಾತ್ರಿವರೆಗೂ ಪಬ್ ತೆರೆದಿದ್ದ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಎಫ್ ಐಆರ್ ದಾಖಲಿಸಿದ್ದಾರೆ.
ಸರ್ಕಾರದ ನಿಗದಿಪಡಿಸಿರುವ ನಿಯಮಗಳನ್ನ ಮೀರಿ ಕಾರ್ಯ ನಿರ್ವಹಿಸುತ್ತಿರುವ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರಂದು ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.
ಈ ವೇಳೆ, ಅವಧಿ ಮೀರಿದ ಬಳಿಕವೂ ಗ್ರಾಹಕರಿಗೆ ಅನುವು ಮಾಡಿಕೊಡುತ್ತಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.