ಬೆಳಗಾವಿ : ಮಧ್ಯಪ್ರದೇಶದ ಕ್ಯಾಬಿನೆಟ್ ಸಚಿವ ಕುನ್ವರ್ ವಿಜಯ್ ಶಾ ಅವರು ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಇಂದು ಅವರು FIR ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದು, ಈ ವೇಳೆ ಸುಪ್ರೀಂ ಕೋರ್ಟ್ ಸಿಜೆ ಗವಾಯಿ ಅವರು ಸಚಿವರಿಗೆ ಛೀಮಾರಿ ಹಾಕಿದರು.
ಇದೀಗ ಸೋಫಿಯಾ ಖುರೇಶಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧ್ಯಪ್ರದೇಶದ ವಿಜಯ ಶಾ ವಿರುದ್ಧ ಬೆಳಗಾವಿಯ ಸೆನ್ ಠಾಣೆಯಲ್ಲಿ ಎಸ್.ಪಿ ಭೀಮಾಶಂಕರ್ ಗುಳೇದ ಅವರ ಸೂಚನೆಯ ಮೇರೆಗೆ ಇದೀಗ ವಿಜಯ ಶಾ ವಿರುದ್ಧ ಪ್ರಕರಣ ದಾಖಲಾಗಿದೆ ಬಿಎನ್‌ಎಸ್ ಕಾಯ್ದೆ 353, 192ರ ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.