ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿ ದರ್ಶನ ಪಡೆದ ನಂತರ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ಆರೋಪದಡಿ ಅವರ ವಿರುದ್ಧ ಇದೀಗ FIR ದಾಖಲಾಗಿದೆ.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 153(ಎ) 295 (ಎ) ಅಡಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದೆ.
ಹುಬ್ಬಳ್ಳಿ ಧಾರವಾಡ ಪಾಲಿಕೆ ವಲಯ 8ರ ಸಹಾಯಕ ಆಯುಕ್ತ ಚಂದ್ರಶೇಖರಗೌಡ ಎಂಬುವವರು ದೂರು ನೀಡಿದ್ದಾರೆ.ಆಯುಕ್ತರು ನೀಡಿದ ದೂರಿನ ಮೇಲೆ ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ಮುತಾಲಿಕ್ ಮೇಲೆ FIR ದಾಖಲಾಗಿದೆ.