ಬೆಂಗಳೂರು: ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ ವಿಚಾರಕ್ಕೆ ರತನ್ ರಂಜನ್, ಅರುಣ್ ಕೊಶಿಲ್ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬಿಹಾರ ಮೂಲದ ಆರೋಪಿಗಳು ರಾಹುಲ್ ಗಾಂಧಿ ಫೋಟೋ ಮಾರ್ಫ್ ಮಾಡಿದ್ದಾರೆ.
ಇದರಿಂದ ಸುಳ್ಳು, ಮಾನಹಾನಿ, ಸ್ತ್ರೀ ದ್ವೇಷ ವಿಚಾರ ಪ್ರಕಟಿಸಿದ್ದಾರೆ. ಹೀಗಾಗಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಠಾಣೆಗೆ ದೂರು ನೀಡಲಾಗಿದೆ. ಕಾಂಗ್ರೆಸ್ ಕಾರ್ಯಕರ್ತೆ ಪ್ರಿಯಾಂಕಾ ದೇವಿ ದೂರಿನ ಮೇರೆಗೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.




