ಚಡಚಣ : ತಾಲೂಕಿನ ದೇವರ ನಿಂಬರಗಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಎಂಬುವರ ಮೇಲೆ ದುಷ್ಕರ್ಮಿಗಳು 4 ಬಾರಿ ಗುಂಡು ಹಾರಿಸಿದ್ದಾರೆ.
ಈ ಘಟನೆಯಲ್ಲಿ ಪಂಚಾಯಿತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾದೇವ ಭೈರಗೊಂಡ ಪರಮಾಪ್ತ ಭೀಮನಗೌಡ ಬಿರಾದಾರ ಸಹಜವಾಗಿಯೇ ಇಂದು ಮುಂಜಾನೆ ಪಂಚಾಯಿತಿ ಬಳಿಯ ತಲೆಗೂದಲು ಕಟಿಂಗ್ ಅಂಗಡಿಗೆ ಬಂದ ಘಳಿಗೆಯಲ್ಲಿ ಅಂಗಡಿಗೆ ಧಾವಿಸಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಭೀಮನಗೌಡನ ತಲೆಗೆ ಫೈರಿಂಗ್ ಮಾಡಿ ಹತ್ಯೆಗೈದಿದ್ದಾರೆ. ಬಳಿಕ ಈ ಕೃತ್ಯ ಎಸಗಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಹಳೆಯ ವೈಷ್ಯಮ್ಯವೇ ಕಾರಣ ಎಂದು ತಿಳಿದುಬಂದಿದೆ.
ಈ ಸುದ್ದಿ ತಿಳಿದ ಚಡಚಣ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಈ ಕುರಿತು ತನಿಖೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರದಿ : ಉಮಾಶಂಕರ ಕ್ಷತ್ರಿ




