Ad imageAd image

“ಐದು ಬೇಡಿಕೆಗಳು ಈಡೇರಿಸುವಂತೆ ಆಗ್ರಹ “

Bharath Vaibhav
“ಐದು ಬೇಡಿಕೆಗಳು ಈಡೇರಿಸುವಂತೆ ಆಗ್ರಹ “
WhatsApp Group Join Now
Telegram Group Join Now

ನಿಡಗುಂದಿ:-ಕರ್ನಾಟಕ ರಾಜ್ಯ ಪ್ರಾರ್ಥಮಿಕ ಶಾಲಾ ಶಿಕ್ಷಕರ ಸಂಘ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದಂಡಾಧಿಕಾರಿಗಳಿಗೆ ಮನವಿ.
“ಐದು ಬೇಡಿಕೆಗಳು ಈಡೇರಿಸುವಂತೆ ಆಗ್ರಹ ”

1″2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು.”

2″ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.”

3″ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.”

4″ ಪ್ರಾಥಮಿಕ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.

5″ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ ಯೊಂದಿಗೆ ಬಡ್ತಿ ನೀಡುವುದು.”
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ವಿವಿಧ ಪದಾಧಿಕಾರಿಗಳನ್ನು ಒಳಗೊಂಡಂತೆ ಅನೇಕ ಶಿಕ್ಷಕ ಶಿಕ್ಷಕಿಯರು ಮನವಿಯನ್ನ ಸಲ್ಲಿಸಿದರು.

ವರದಿ :-ಅಲಿ ಮಕಾನದಾರ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!