ಬೆಳಗಾವಿ: ಐದು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಭೆಂಡವಾಡ ಗ್ರಾಮದಲ್ಲಿ ನಡೆದಿದೆ.
ಲಲಿತಾ ಸದಾನಂದ ಕರಜಗಿ 24 ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಆದರೆ ಘಟನೆ ಆಗುತ್ತಿದ್ದಂತೆ ಲಲಿತಾ ಪತಿ ಹಾಗೂ ಪತಿಯ ಕುಟುಂಬಸ್ಥರು ಪರಾರಿಯಾಗಿದ್ದು, ಲಲಿತಾಳನ್ನ ಕೊಲೆ ಮಾಡಿ ನೇಣು ಹಾಕಿದ್ದಾರೆ.
ಘಟನಾ ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.