ಚಿತ್ತೂರು : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತರಿದ್ದ ಕಾರು ಬೆಂಗಳೂರಿನಿಂದ ಆಂಧ್ರದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದ್ದು, ಎದುರುಗಡೆಯಿಂದ ಬಂದ ಲಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಬೆಂಗಳೂರಿನಿಂದ ತಿರುಪತಿ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರ ಹಿನ್ನೆಲೆ: ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತಪಟ್ಟವರೆಲ್ಲರೂ ಕರ್ನಾಟಕ ಮೂಲದವರು ಎಂದು ಗುರುತಿಸಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
ಪೊಲೀಸ್ ಭೇಟಿ: ಸುದ್ದಿ ತಿಳಿಯುತ್ತಿದ್ದಂತೆಯೇ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರಿನಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಅವರ ಕುಟುಂಬದವರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ.




