————————————ಟ್ಯಾಲೆಂಟ್ ಸರ್ಚ ಪರೀಕ್ಷೆ
ಬೈಲಹೊಂಗಲ: ಜಿಲ್ಲಾ ಪಂಚಾಯತಿ ಬೆಳಗಾವಿ ಇವರ ವತಿಯಿಂದ ನಡೆದ ತಾಲೂಕು ಮಟ್ಟದ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಗರಗದ, 10 ನೇ ತರಗತಿಯ ವಿದ್ಯಾರ್ಥಿಗಳಾದ ಶ್ರದ್ಧಾ ಹೊಂಗಲ, ಸೃಷ್ಟಿ ಹಿರೇಮಠ, ಸಾನಿಕಾ ಕುಲಕರ್ಣಿ, ಭಾಗ್ಯಶ್ರೀ ಬಡಿಗೇರ ಉತ್ತಮ ಸಾಧನೆ ಮಾಡಿ ಟಾಪ್ 50 ರ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳ ಈ ಅಭೂತಪೂರ್ವ ಸಾಧನೆಗೆ ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜೆ.ಆರ್.ನರಿ, ಪಿ.ಎಸ್.ಗುರುನಗೌಡರ, ಎಚ್.ವಿ.ಪುರಾಣಿಕ, ಎಸ್.ವಿ.ಬಳಿಗಾರ, ಎಂ.ಎನ್.ಕಾಳಿ, ವಿ.ಬಿ.ಪಾಟೀಲ, ಎಸ್.ಬಿ.ಸಾಳುಂಕೆ, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು, ಗ್ರಾಮದ ಹಿರಿಯರು ಅಭಿನಂದನೆ ಸಲ್ಲಿಸಿದ್ದಾರೆ.
ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಬೆಳಗಾವಿ ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಎಲ್ಲ ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ವಸತಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬಹುಆಯ್ಕೆ ಮಾದರಿಯ ಪರೀಕ್ಷೆ ನಡೆಸಲಾಗಿತ್ತು.
ವರದಿ: ದುಂಡಪ್ಪ ಹೂಲಿ




