Ad imageAd image

ಇಂದಿನಿಂದ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರು, ದೇವದಾಸಿಯರ ಮೂಲ ಹಂತದ ಸಮೀಕ್ಷೆ

Bharath Vaibhav
ಇಂದಿನಿಂದ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರು, ದೇವದಾಸಿಯರ ಮೂಲ ಹಂತದ ಸಮೀಕ್ಷೆ
WhatsApp Group Join Now
Telegram Group Join Now

ಬೆಂಗಳೂರು : ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆಪ್ಟಂಬರ್ ‌15ರಿಂದ ಆರಂಭಿಸಿ, 45 ಕಚೇರಿ ಕೆಲಸದ ದಿನಗಳಲ್ಲಿ ಮುಕ್ತಾಯಗೊಳಿಸಲಾಗುತ್ತದೆ.

ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದ್ದು, ಮೊಬೈಲ್​ ಆಯಪ್​ ಮೂಲಕ ಟ್ರಾನ್ಸ್​ಜೆಂಡರ್ಸ್ ಸಮೀಕ್ಷೆ ನಡೆಯಲಿದೆ.

ಇದಕ್ಕಾಗಿ KARMANI ವೆಬ್​ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಗೆ ಸೇವಾ ಸಿಂಧು ಮೂಲಕ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ವೆಬ್​ ಅಪ್ಲಿಕೇಶನ್ ರೆಡಿ ಮಾಡಲಾಗಿದೆ. ಈ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಸಮೀಕ್ಷೆ ನಡೆಯಲಿದೆ.

ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಸಂಬಂಧ ಎರಡೂ ಸಮೀಕ್ಷೆಗಳನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆಸಲಾಗುವುದು ಎಂದಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಮೂಲಹಂತದ ಸಮೀಕ್ಷಾ ಕಾರ್ಯನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳನ್ನು ಒಳಗೊಂಡ ಜಿಲ್ಲಾಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿಗಳನ್ನು ರಚಿಸಲಾಗುತ್ತದೆ.

ಹಾಗೆಯೇ, ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷಾ ಕಾರ್ಯನಿರ್ವಹಣೆಗಾಗಿ ವಿವಿಧ ಹಂತಗಳಲ್ಲಿ ಆಂತರಿಕ ಸಮಿತಿ, ಜಿಲ್ಲಾ ಮತ್ತು ರಾಜ್ಯಮಟ್ಟದ ಸಮಿತಿ (ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಿತಿ) ಗಳನ್ನು ಮಾಜಿ ದೇವದಾಸಿ ಮಹಿಳೆಯರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ರಚನೆ ಮಾಡಲಾಗಿರುತ್ತದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!