————————————–ನಿಪ್ಪಾಣಿಯಲ್ಲಿ ಪ್ರತಿಭಟನೆ ರ್ಯಾಲಿ
ನಿಪ್ಪಾಣಿ: ಕನ್ನೇರಿಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿಯವರನ್ನು ವಿಜಯಪುರ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧಿಸಿರುವುದನ್ನು ಖಂಡಿಸಿ ಕರ್ನಾಟಕ ಸರ್ಕಾರದ ವಿರುದ್ಧ ನಿಪ್ಪಾಣಿ ತಾಲೂಕಿನ ಬಸವಾದಿ ಶರಣರು, ಹಿಂದೂ ಬಾಂಧವರು ಹಾಗೂ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಜನಪ್ರಿಯ ಶಾಸಕರಾದ ಸೌ.ಶಶಿಕಲಾ ಜೊಲ್ಲೆ ಮಾಜಿ ಸಂಸದರು,ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಮುಖ ಉಪಸ್ಥಿತಿಯಲ್ಲಿ ನಡೆಸಿ,ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮತ್ತು ಮುಖ್ಯಮಂತ್ರಿಗಳಿಗೆ ನಿರ್ಬಂಧವನ್ನು ಕೂಡಲೇ ಹಿಂಪಡೆಯುವ ಕುರಿತು ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ನಿಪ್ಪಾಣಿಯ ಪ. ಪೂ.ಶ್ರೀ ಪ್ರಾಣಲಿಂಗ ಸ್ವಾಮೀಜಿ, ಬಾದಾಮಿಯ ಪ.ಪೂ.ಶ್ರೀ ಬಸವರ್ರಾಜೇಂದ್ರ ಸ್ವಾಮೀಜಿ ಪ. ಪೂ.ಶ್ರೀ ಬಸವಮಲ್ಲಿಕಾರ್ಜುನ ಸ್ವಾಮೀಜಿ,ದಿವ್ಯ ಸಾನಿಧ್ಯ ವಹಿಸಿದ್ದರು.
ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ! ಇಂಥ ಜನಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ,ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೆ ಬಯಲುಪಡಿಸಿದೆ.
ಹಿಂದೂ ಧರ್ಮೀಯ ಗುರುಗಳು ಮತ್ತು ಸರ್ಕಾರಿ ನೀತಿಗಳ ವಿರುದ್ಧ ಧ್ವನಿ ಎತ್ತುವವರನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡುವುದನ್ನು ನಿಲ್ಲಿಸಿ,ಕಾಡಸಿದ್ದೇಶ್ವರ ಸ್ವಾಮೀಜಿಯವರ ನಿರ್ಬಂಧವನ್ನು ಕೂಡಲೇ ಹಿಂಪಡೆಯಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದೆಂದರು.
ಗ್ರಾಮೀಣ ಜೀವನೋಪಾಯ, ಸ್ವಾವಲಂಬಿ ಯೋಜನೆಗಳು, ಕೌಶಲ್ಯ ತರಬೇತಿ ಮುಂತಾದ ಕ್ಷೇತ್ರಗಳಲ್ಲಿ ಅನನ್ಯ ಸೇವೆ ನೀಡಿರುವ ಶ್ರೀ ಕನ್ನೇರಿ ಮಠದ ಸ್ವಾಮೀಜಿಯವರನ್ನು ಎಲ್ಲಾ ಸಮುದಾಯದ ಜನರು ಗೌರವದಿಂದ ನೋಡಿಕೊಳ್ಳುತ್ತಾರೆ.
ಹಿಂದೂ ಸಂಸ್ಕೃತಿ ಮತ್ತು ಸನಾತನ ಧರ್ಮವನ್ನು ಉಳಿಸಿ ಬೆಳೆಸುವಲ್ಲಿ ಅವರ ಕೊಡುಗೆ ಅಪಾರವಾದುದು.ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ರ್ಯಾಲಿ ಯಲ್ಲಿ ವಿವಿಧ ಸಂಘಟನೆಗಳು ಸೇರಿದಂತೆ ಶ್ರೀಗಳ ಭಕ್ತರು ಅಪಾರ ಪ್ರಮಾಣದಲ್ಲಿ ಪಾಲ್ಗೊಂಡಿದ್ದರು.
ವರದಿ: ಮಹಾವೀರ ಚಿಂಚಣೆ




