Ad imageAd image

ನಾಳೆಯಿಂದಲೇ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ : ಈಶ್ವರ ಖಂಡ್ರೆ 

Bharath Vaibhav
ನಾಳೆಯಿಂದಲೇ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ : ಈಶ್ವರ ಖಂಡ್ರೆ 
KHANDRE
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.

ಈ ಸಂಬಂಧ ಮಾಧ್ಯ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ್ಮ ತಮ್ಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್ ಜನರಲ್ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!