ಬೆಂಗಳೂರು:ಕಾಂಗ್ರೆಸ್’ನಮಾಜಿ ಶಾಸಕ ಆರ್, ನಾರಾಯಣ್ (80) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಆರ್, ನಾರಾಯಣ್ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ನಾರಾಯಣ್ ಸೇವೆ ಸಲ್ಲಿಸಿದ್ದರು. ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಒಟ್ಟು ಮೂರು ಬಾರಿ ಶಾಸಕರಾಗಿದ್ದರು.
ಇಂದು ಮಧ್ಯಾಹ್ನ 12 ಗಂಟೆಯಿಂದ ಗಾಂಧಿನಗರ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ತಿಳಿದು ಬಂದಿದೆ.