Ad imageAd image

ಜಗದೀಶ್ ಶೆಟ್ಟರ್ ಪರ ಮತಯಾಚಿಸಿದ ಮಾಜಿ ಸಚಿವ ಬೈರತಿ ಬಸವರಾಜ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ: -ಇದು ದೇಶದ ಚುನಾವಣೆ, ನಿಮ್ಮ ಅಮೂಲ್ಯ ಮತ ಜಗದೀಶ್ ಶೆಟ್ಟರ್ ಅವರಿಗೆ ನೀಡುವ ಮೂಲಕ ಮೋದಿಯವರ ಕೈ ಬಲ‌ ಪಡಿಸಬೇಕು ಎಂದು ಮಾಜಿ ಸಚಿವರಾದ ಬೈರತಿ ಬಸವರಾಜ ಅವರು ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಉತ್ತರ ಮತಕ್ಷೇತ್ರದ ಸಮರ್ಥ ನಗರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ನಾನು ನಗರಾಭಿವೃದ್ಧಿ ಸಚಿನಾಗಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬೆಳಗಾವಿ ನಗರಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದೇವೆ.‌

ರಸ್ತೆಗಳ ಉನ್ನತ್ತಿಕರಣ, ವಿದ್ಯುತ್ ದೀಪಗಳ ಅಳವಡಿಕೆ, ಕುಡಿಯುವ ನೀರಿನ ಯೋಜನೆ ಅನುಷ್ಠಾನ, ಟ್ರಾಫಿಕ್ ಸಮಸ್ಯೆ ಬಗೆಹರಿಸುವುದು ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ. ವಿಶೇಷವಾದ ಬಸ್ ನಿಲ್ದಾಣ ಕೂಡ ನಿರ್ಮಾಣ ಮಾಡಿದ್ದೇವೆ ಎಂದು ತಿಳಿಸಿದರು.

ಈ ದೇಶದ ಭದ್ರತೆ ದೃಷ್ಟಿಯಿಂದ, ಈ ದೇಶದ ಅಭಿವೃದ್ಧಿ ದೃಷ್ಟಿಯಿಂದ, ಎಲ್ಲರೂ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು. ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು.‌ ವಿಷೇಶವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬೆಂಬಲಿಸಿಸುವ ಮೂಲಕ ಅವರನ್ನು ಲೋಕಸಭೆಗೆ ಕಳುಹಿಸಬೇಕು. ಮುಂದೆ ಅನೇಕ ಯೋಜನೆಗಳು ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ಬರಬೇಕು.

ಜಗದೀಶ್ ಶೆಟ್ಟರ್ ಅವರಿಗೆ ಅನೇಕ ಇಲಾಖೆಯಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವ ಇದೆ. ಜಗದೀಶ್ ಶೆಟ್ಟರ್ ಅವರನ್ನು ಲೋಕಸಭೆಗೆ ಆರಿಸಿ ಕಳುಹಿಸಿದರೆ ಈ ಲೋಕಸಭಾ ಕ್ಷೇತ್ರ ಅಭಿವೃದ್ಧಿ ಆಗಲಿದೆ. ನರೇಂದ್ರ ಮೋದಿಯವರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣ ಆಗಿದೆ.‌ ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿಲಾಗಿದೆ, ಹಾಗಾಗಿ ಜಗದೀಶ್ ಶೆಟ್ಟರ್ ಅವರಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.‌

ಸಂದರ್ಭದಲ್ಲಿ ಬಿಜೆಪಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಅನಿಲ ಬೆನಕೆ, ಪ್ರಮುಖರಾದ ನೇತ್ರಾವತಿ ಬಾಗವತ್, ಮುರಘಂದ್ರಗೌಡ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!