ಬೆಂಗಳೂರು: ಬಳ್ಳಾರಿಯ ಮಾಜಿ ಎಂಎಲ್‌ಸಿ, ಹಿರಿಯ ಮುತ್ಸದ್ದಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ಲಿಂಗೈಕ್ಯರಾಗಿದ್ದಾರೆ.
ಅವರಿಗೆ 97 ವರ್ಷ ವಯಸ್ಸು ಆಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬಳ್ಳಾರಿ ನಿವಾಸದಲ್ಲಿ ನೆಲೆಸಿದ್ದರು.ತಿಪ್ಪಣ್ಣ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವಿಶ್ವವಿದ್ಯಾಲಯ 8ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಎನ್ ತಿಪ್ಪಣ್ಣ ಸೇವೆ ಸಲ್ಲಿಸಿದ್ದರು. ಇಳಿ ವಯಸ್ಸಿನಲ್ಲೂ ತಮ್ಮ ಕೆಲಸಗಳಿಂದ ಜನರ ಮನ ಗೆದ್ದಿದ್ದರು.




