ಬೆಂಗಳೂರು : ಅತ್ಯಾಚಾರ ಪ್ರಕರಣದ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಮತ್ತೊಂದು ಶಾಕ್ ನೀಡಿದೆ.
3 ಕೇಸ್ ಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ಸಲ್ಲಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ನಡೆಸಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ರೇಪ್ ಕೇಸ್ ಆರೋಪದಲ್ಲಿ ಸಾಕ್ಷಿ ವೀಕ್ಷಣೆಗೆ ನ್ಯಾಯಾಲಯ ಪ್ರಜ್ವಲ್ಗೆ ಕೋರ್ಟ್ ಅವಕಾಶ ನೀಡಿತ್ತು. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣದ ಆರೋಪದಡಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ದೋಷಾರೋಪ ನಿಗದಿಪಡಿಸಿ, ವಿಚಾರಣೆಗೆ ಮುಂದಾಗಿದ್ದ ಸೆಷನ್ಸ್ ನ್ಯಾಯಾಲಯದ ಪ್ರಕ್ರಿಯೆ ಮುಂದೂಡಲು ನಿರ್ದೇಶಿಸುವಂತೆ ಕೋರಿ ಪ್ರಜ್ವಲ್ ಸಲ್ಲಿಸಿದ್ದ ಮಧ್ಯಂತರ ಮನವಿಯನ್ನು ಮೊನ್ನೆಯಷ್ಟೇ ಹೈಕೋರ್ಟ್ ತಿರಸ್ಕರಿಸಿ ಶಾಕ್ ನೀಡಿದ್ದು ಗೊತ್ತೇ ಇದೆ.