ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್ (84) ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಏ.27ರಂದು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲು ಸಿದ್ಧತೆಗಳು ನಡೆದಿವೆ.ಕಸ್ತೂರಿ ರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
2023ರ ಜುಲೈ ತಿಂಗಳಲ್ಲಿ ಕಸ್ತೂರಿ ರಂಗನ್ ಅವರು ಕೊಲಂಬೊದಲ್ಲಿದ್ದಾಗ ಅವರಿಗೆ ಲಘ ಹೃದಯಾಘಾತವೂ ಆಗಿತ್ತು. ಅಂದು ಅವರನ್ನು ಬೆಂಗಳೂರಿಗೆ ಏರ್ಲಿಫ್ಟ್ ಕೂಡ ಮಾಡಲಾಗಿತ್ತು.