ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇಂದು ಪ್ರಧಾನಿ ಮೋದಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಹಲವರು ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.