ತುಮಕೂರು : ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾದ ಘಟನೆ ತುಮಕೂರು ಬಳಿ ನಡೆದಿದೆ. ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೋರಾ ಬಳಿಯ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.ಕ್ರೂಸರ್ ವಾಹನದಲ್ಲಿದ್ದ ನಾಲ್ವರು ಅಯ್ಯಪ್ಪ ಭಕ್ತರು ದುರ್ಮರಣಕ್ಕೀಡಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಂತಿದ್ದ ಲಾರಿಗೆ ವೇಗವಾಗಿ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿಯಾಗಿ ಬಾಲಕಿ ಸೇರಿದಂತೆ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.




