ಉನ್ನಾವ್: ಉತ್ತರ ಪ್ರದೇಶದ ಉನ್ನಾವೊದಲ್ಲಿ ಭಾನುವಾರ ಸಂಜೆ ಫ್ಯಾನ್ ಬಳಿ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
“ಬರಸಾಗ್ವಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿ ವೀರೇಂದ್ರ ಕುಮಾರ್ ಸರೋಜ್ ಅವರ ಮನೆಯಲ್ಲಿ ವಿದ್ಯುತ್ ಸ್ಪರ್ಶದಿಂದ ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ.ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಸರ್ಕಲ್ ಆಫೀಸರ್ (ನಗರ) ಅಶುತೋಷ್ ಕುಮಾರ್ ತಿಳಿಸಿದ್ದಾರೆ.
ಮೃತ ಮಕ್ಕಳನ್ನು ಮಾಯಾಂಕ್, ಹಿಮಾಂಶಿ, ಹಿಮಾಂಕ್ ಮತ್ತು ಮಾನ್ಸಿ ಎಂದು ಗುರುತಿಸಲಾಗಿದೆ. ಮಕ್ಕಳು ಫರಾಟಾ ಫ್ಯಾನ್ನ ಸಮೀಪದಲ್ಲಿ ಆಟವಾಡುತ್ತಿದ್ದರು, ಅದು ಆನ್ ಆಗಿತ್ತು.
ಮಕ್ಕಳ ಸಾವಿಗೆ ವಿದ್ಯುದಾಘಾತವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸರ್ಕಲ್ ಆಫೀಸರ್ ಕುಮಾರ್ ತಿಳಿಸಿದ್ದಾರೆ.
ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಸ್ತುತ ಕೂಲಂಕಷ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.