ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದಲ್ಲಿ ಘಟನೆ ನಡೆದಿದೆ.
ಚೇತನ್, ರೂಪಾಲಿ ದಂಪತಿ, ವೃದ್ಧೆ ಮತ್ತು ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರಿಗೆ ವಿಷ ನೀಡಿ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ.