ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಗ್ರಾಮದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಕಾರು ಹಾಗು ಬಸ್ ಗೆ ಬೆಳ್ಳುಳ್ಳಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾನಪುರದ ಬಳಿ ಈ ಒಂದು ಭೀಕರ ಪಘಥ ಸಮವಿದೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಸರಣಿ ಅಪಘಾತದ ಬಳಿಕ ಕಾರಿನ ಮೇಲೆ ಲಾರಿ ಪಲ್ಟಿಯಾಗಿದೆ. ಡಿಕ್ಕಿಯ ಹೊಡೆದ ಬಳಿಕ ಸುಮಾರು 100 ಮೀಟರ್ ವರೆಗೂ ಕಾರನ್ನು ಎಳೆದೋಯ್ದಿದೆ.
ಲಾರಿ ಚಾಲಕನ ಅಜಾರುಕತೆಯಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




