ತುಂಗಭದ್ರಾ ನದಿಯಲ್ಲಿ ಸ್ನಾನಕ್ಕಿಳಿದ ನಾಲ್ವರು ನೀರು ಪಾಲಾಗಿದ್ದಾರೆ. ಆಂಧ್ರಪ್ರದೇಶದ ಸಾತುನೂರು ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ.
ರಾಜಲಬಂಡ ಅಣೆಕಟ್ಟಿನ ಕೊನೆಯ ಭಾಗದಲ್ಲಿರುವ ಸಾತುನೂರು ಬಳಿ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಉಮಾವತಿ(35), ರತ್ನಾ(24), ಮಹೇಶ್(28), ಶಿವಾನಂದ(24) ನೀರು ಪಾಲಾದವರು ಎಂದು ಗುರುತಿಸಲಾಗಿದೆ.
ಮೃತರು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರುಡಿ ಗ್ರಾಮದ ನಿವಾಸಿಗಳಾಗಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.




