ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಸದ್ದು ಜೋರಾಗಿದೆ. ಸಿದ್ಧರಾಮಯ್ಯ ಅವರನ್ನು 2.5 ವರ್ಷಕ್ಕೆ ಕೆಳಗಿಳಿಸಿ, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ನೀಡಲಾಗುತ್ತಿದೆ ಎನ್ನಲಾಗುತ್ತಿದೆ. ಇದೇ ಹೊತ್ತಿನಲ್ಲಿ ನಾನೂ ಸಿಎಂ ಆಗಲು ಸಿದ್ಧ ಅಂತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ ಅವರದ್ದು ವೈಯಕ್ತಿಕ ಅಭಿಪ್ರಾಯ. ಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಸನ್ನಿವೇಶ ಬಂದು, ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ಧ ಎಂಬುದಾಗಿ ಹೇಳುವ ಮೂಲಕ ನಾನು ಸಿಎಂ ರೇಸ್ ನಲ್ಲಿ ಇದ್ದೇನೆ ಎಂಬುದಾಗಿ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ, ಇದರಲ್ಲಿ ತಪ್ಪಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.