Ad imageAd image

ಆಗಸ್ಟ್ 17 ರಂದು ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

Bharath Vaibhav
ಆಗಸ್ಟ್ 17 ರಂದು ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
WhatsApp Group Join Now
Telegram Group Join Now

ತುರುವೇಕೆರೆ : ಲಯನ್ಸ್ ಕ್ಲಬ್, ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಟ್, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 17 ರಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಪಟ್ಟಣದ ಲಯನ್ಸ್ ಭವನದಲ್ಲಿ ಮಹಿಳೆಯರಿಗಾಗಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹೆಚ್.ಎನ್. ಪರಮೇಶ್ವರಯ್ಯ ತಿಳಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಲಯನ್ಸ್ ಸಂಸ್ಥೆಯು ಅನೇಕ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಾಲೂಕಿನ ಜನರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ವಿಶೇಷವಾಗಿ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರದ ಮೂಲಕ ಸಹಸ್ರಾರು ಮಂದಿ ಅಂಧರ ಬಾಳಿಗೆ ಬೆಳಕಾಗಿದೆ. ಇದಲ್ಲದೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ತಾಲೂಕಿನ ವಿವಿದೆಢೆ ನಡೆಸಿ ಯಶಸ್ವಿಯಾಗಿದೆ. ಈಗ ಮಹಿಳೆಯರಿಗಾಗಿ ವಿಶೇಷವಾಗಿ ಉಚಿತವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ನುರಿತ ಮಹಿಳಾ ವೈದ್ಯರಿಂದಲೇ ಖಾಸಗಿ ಸ್ಥಳದಲ್ಲಿ ತಪಾಸಣೆ ಮಾಡಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ತಾಯಂದಿರು, ಮಹಿಳೆಯರು ಆಗಮಿಸಿ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರಿದರು.

ಶಿಬಿರವನ್ನು ಇನ್ನರ್ ವೀಲ್ ಕ್ಲಬ್ ಗೌರವ ಸಲಹೆಗಾರರ ಹಾಗೂ ವೈದ್ಯೆ ಡಾ.ಆಶಾ ಚೌದ್ರಿ ಉದ್ಘಾಟಿಸಲಿದ್ದು, ಅತಿಥಿಗಳಾಗಿ ವಲಯಾಧ್ಯಕ್ಷ ರಂಗನಾಥ್, ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಧನಪಾಲ್, ಮಾಯಸಂದ್ರ ವೈದ್ಯಾಧಿಕಾರಿ ಡಾ.ಸ್ವರೂಪ್, ಇನ್ನರ್ ವೀಲ್ ಕ್ಲಬ್ ಆಫ್ ಸಂಕಲ್ಪದ ಅಧ್ಯಕ್ಷೆ ಇಂದಿರಾಪ್ರಭಾಕರ್ ಆಗಮಿಸಲಿದ್ದಾರೆ. ಶಿಬಿರದಲ್ಲಿ ಪಾಲ್ಗೊಳ್ಳುವ ಮಹಿಳೆಯರು ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಮುಂಚಿತವಾಗಿ ನೋಂದಣಿ ಮಾಡಿಸಿಕೊಳ್ಳಬೇಕೆಂದರು. ನೋಂದಣಿಗಾಗಿ : 9845087790, 9844415252, 9448416750 ಗೆ ಸಂಪರ್ಕಿಸಲು ಕೋರಿದ್ದಾರೆ.

ಈ ಸಂದರ್ಭದಲ್ಲಿ ಲಯನ್ಸ್ ಕಾರ್ಯದರ್ಶಿ ಡಾ.ಎ.ನಾಗರಾಜ್, ಖಜಾಂಚಿ ಸುನಿಲ್ ಕುಮಾರ್, ಟ್ರಸ್ಟ್ ಅಧ್ಯಕ್ಷ ಧನಪಾಲ್, ಪದಾಧಿಕಾರಿಗಳಾದ ರಂಗನಾಥ್, ಗಂಗಾಧರ ದೇವರಮನೆ, ಸುನಿಲ್ ಬಾಬು, ಟಿಎವಿ ಗುಪ್ತ, ಸುಮಾ ಮಲ್ಲಿಕ್, ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!