ಕೊಪ್ಪಳ : ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಅಪಸ್ವರ ಕೇಳಿಬರುತ್ತಿವೆ. ಉಚಿತ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್ನಲ್ಲಿ ಓಡಾಡುತ್ತಿದ್ದಾರೆ.
ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ ಅದನ್ನೇ ಆರ್.ವಿ ದೇಶಪಾಂಡೆ ಪುನರುಚ್ಛರಿಸಿದ್ದಾರೆ.
ಕೊಪ್ಪಳದಲ್ಲಿಂದು ಮಾತನಾಡಿದ ದೇಶಪಾಂಡೆ, ಹೆಣ್ಮಕ್ಕಳು ಎಲ್ಲೊಂದರಲ್ಲಿ ಹೋಗುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಬಸ್ನಲ್ಲಿ ಹತ್ತಲು ಆಗುತ್ತಿಲ್ಲ. ಪರಿಸ್ಥಿತಿ ಕೆಟ್ಟದಾಗಿದೆ ಎಂದರು.
ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಆರ್ವಿ ದೇಶಪಾಂಡೆ ಹೇಳಿದ್ದಾರೆ. ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.




