ಬೆಂಗಳೂರು: –ಪೀಣ್ಯ,ದಾಸರಹಳ್ಳಿ: ಸತತ 18 ವರ್ಷಗಳಿಂದ ಕನ್ನಡ ನಾಡು, ನುಡಿ, ಜಲ ವಿಚಾರವಾಗಿ ರಾಜಿಯಾಗದೇ ಕನ್ನಡ ಪರ ಹೋರಾಟಗಳನ್ನು ಮಾಡುತ್ತಾ ಬಂದಿರುವ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೆರೆ ವಿನೋದ್ ರವರ ಹುಟ್ಟುಹಬ್ಬವನ್ನು ಅಬ್ಬಿಗೆರೆಯ ಶ್ರೀ ಶಿವಕುಮಾರ ಸ್ವಾಮೀಜಿ ಮುಖ್ಯರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ನೇಹಿತರು, ಹಿತೈಷಿಗಳು, ಅಭಿಮಾನಿಗಳು ಹಾಗೂ ಕುಟುಂಬದವರೊಂದಿಗೆ ಕೇಕ್ ಕತ್ತರಿಸಿ, ಶಾಲು ಹೊದಿಸಿ, ಬೃಹದಾಕಾರದ ಹಾರ ಹಾಕಿ ಅದ್ದೂರಿಯಾಗಿ ಆಚರಿಸಲಾಯಿತು.
ಅಬ್ಬಿಗೆರೆ ವಿನೋದ್ ರವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಜನರಿಗೆ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಲಾಯಿತು. ಹಲವಾರು ಮಂದಿ ರಕ್ತದಾನ ಮಾಡಿದರು.
ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಬ್ಬಿಗೆರೆ ವಿನೋದ್, ‘ ನನ್ನ ಹುಟ್ಟುಹಬ್ಬಕ್ಕೆ ನಮ್ಮ ಕರವೇ ಪದಾಧಿಕಾರಿಗಳು, ಸ್ನೇಹಿತರು ಸೇರಿದಂತೆ ರಾಜ್ಯದೆಲ್ಲೆಡೆಯಿಂದ ಶುಭ ಕೋರಿದ್ದೀರಿ. ನಿಮ್ಮೆಲ್ಲರಿಗೂ ನಾನು ಎಂದಿಗೂ ಋಣಿಯಾಗಿರುತ್ತೇನೆ. ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ನಾನು ಯಾವಾಗಲೂ ನಿಮ್ಮೊಂದಿಗಿರುತ್ತೇನೆ’, ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ಉನ್ನತ ಸ್ಥಾನದ ಹೊಣೆ ಹೊಂದಿದ ಮೇಲೆ ಬಡ ಜನರ ಸೇವೆಯನ್ನು ಅವರ ಋಣವನ್ನು ಈ ರೀತಿಯ ಆರೋಗ್ಯ ಶಿಬಿರಗಳ ಮೂಲಕವೇ ತೀರಿಸಲು ಸಾಧ್ಯ ಎಂಬುದನ್ನು ಅರಿತಿದ್ದೇನೆ’, ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಗಡ್ಕರಿ ಪರುಷುರಾಮ್, ರಾಜಣ್ಣ ಚನ್ನಪಟ್ಟಣ, ದಯಾಳ್ , ಚಂದ್ರಶೇಖರ್, ಶ್ರೀನಿವಾಸ್, ಸೇರಿದಂತೆ ಹಲವಾರು ಮುಖಂಡರು, ಸ್ನೇಹಿತರು, ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಅಬ್ಬಿಗೇರೆ ಸಮಸ್ತ ನಾಗರಿಕ ಬಂಧು ಭಗನಿಯರು ಅಬ್ಬಿಗೇರೆ ವಿನೋಧ್ ಅವರಿಗೆ ಹೂವು ಗುಚ್ಚು ನೀಡಿ ಸಿಹಿ ತಿನ್ನಿಸಿ ಶುಭ ಹಾರೈಸಿದರು.
ವರದಿ:-ಅಯ್ಯಣ್ಣ ಮಾಸ್ಟರ್