ನವದೆಹಲಿ : ಜುಲೈ 21 ರಿಂದ ಆಗಸ್ಟ್ 21 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಗಸ್ಟ್ 13 ಮತ್ತು 14 ರಂದು ಯಾವುದೇ ಅಧಿವೇಶನ ಇರುವುದಿಲ್ಲ ಎಂದು ಅವರು ಹೇಳಿದರು.