Ad imageAd image

ಪದ್ಮನಾಭ ನಗರ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಪರಿಶೀಲನೆ ಸಭೆ ನಡೆಸಿದ: ಜಿ. ಕೃಷ್ಣಪ್ಪ 

Bharath Vaibhav
ಪದ್ಮನಾಭ ನಗರ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಪರಿಶೀಲನೆ ಸಭೆ ನಡೆಸಿದ: ಜಿ. ಕೃಷ್ಣಪ್ಪ 
WhatsApp Group Join Now
Telegram Group Join Now

ಬೆಂಗಳೂರು: ಬಿಬಿಎಂಪಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅವರ ನೇತೃತ್ವದಲ್ಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿ ಪರಿಶೀಲನಾ ಸಭೆ ನಡೆಯಿತು.

ಪದ್ಮನಾಭ ನಗರ ಕ್ಷೇತ್ರದ ಗ್ಯಾರಂಟಿ ಅನುಷ್ಕಾ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕೃಷ್ಣಪ್ಪ ಅವರು, ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯವೈಖರಿಯಲ್ಲಿ ಪದ್ಮನಾಭನಗರ ಕ್ಷೇತ್ರದ ಬಿಬಿಎಂಪಿ ವ್ಯಾಪ್ತಿ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಿ, ರಾಜ್ಯಕ್ಕೆ ಮಾದರಿಯಾಗುವ ಜತೆಗೆ ಸರಕಾರದ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸವಾಗಲಿ ಎಂದು ಸಲಹೆ ನೀಡಿದರು.

ಈ ವೇಳೆ ಮಾತನಾಡಿದ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್, ನೋಡಲ್ ಅಧಿಕಾರಿಗಳ ಬಳಿ ಮಾಹಿತಿ ಕೊರತೆಯಿದೆ. ಸಭೆಗೆ ಬಂದಾಗ ಸಂಪೂರ್ಣ ಮಾಹಿತಿ ಜತೆಗೆ ಅಧಿಕಾರಿಗಳು ಬಂದರೆ, ಜನರ ಸಮಸ್ಯೆಗಳನ್ನು ಬಗೆಹರಿಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಅಧಿಕಾರಿಗಳಿಗೆ ಕೇಳಿ ನಿಮ್ಮ ವಾರ್ಡ್ ವ್ಯಾಪ್ತಿಯ ಅಂಕಿ-ಅಂಶಗಳನ್ನು ತರಿಸಿಕೊಂಡು ಸಮಸ್ಯೆ ಬಗೆಹರಿಸಿ. ಅಧಿಕಾರಿಗಳು ಸ್ಪಂದಿಸದಿದ್ದರೆ ಸರಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿವೆ. ಅಂತಹ ದೂರುಗಳಿದ್ದರೆ ಕೊಟ್ಟು ಸಮಸ್ಯೆ ಬಗೆಹರಿಸಿ ಎಂದು ಕೃಷ್ಣಪ್ಪ ತಿಳಿಸಿದರು.

ಸಭೆಗೂ ಮುನ್ನ ಹುತಾತ್ಮ ದಿನಾಚರಣೆ ಅಂಗವಾಗಿ ಕಚೇರಿಯಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಸಭೆಯಲ್ಲಿ ಸಹಾಯಕ ಕಂದಾಯ ಅಧಿಕಾರಿ ಹಾಗೂ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ವರದಿ : ಅಯ್ಯಣ್ಣ ಮಾಸ್ಟರ್ 

WhatsApp Group Join Now
Telegram Group Join Now
Share This Article
error: Content is protected !!