ತುಮಕೂರು: ರಾಜ್ಯದಲ್ಲಿ ಸುಳ್ಳು ಸುದ್ದಿ ನಿಯಂತ್ರಣಕ್ಕೆ ಶೀಘ್ರವೇ ಕಾನೂನು ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸುಳ್ಳು ಸುದ್ದಿ ಪ್ರಕಟಿಸುವ ಮಾಧ್ಯಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಯೂಟ್ಯೂಬ್, ಆರ್ ಟಿ ಐ ಕಾರ್ಯಕರ್ತರು ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ರಕ್ಷಣೆ ಕೋರಿ ಮನವಿ, ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.