Ad imageAd image

ಶೀಘ್ರದಲ್ಲೇ 15 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ : ಜಿ. ಪರಮೇಶ್ವರ್ 

Bharath Vaibhav
ಶೀಘ್ರದಲ್ಲೇ 15 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ : ಜಿ. ಪರಮೇಶ್ವರ್ 
G prameshwar
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು.

ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು.

ಇದರಲ್ಲಿ 219 ಪಿಎಸ್‌ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ.

ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು.

ರಿಯಲ್ ಎಸ್ಟೇಟ್ ದಂಧೆಯ ಏಜೆಂಟ್‌ಗಳೊಂದಿಗೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಶಾಮಿಲಾಗುವುದನ್ನು ಸಹಿಸಲಾಗುವುದಿಲ್ಲ. ಅವರೊಂದಿಗೆ ತೊಡಗಿರುವುದು ಕಂಡುಬಂದರೆ‌, ಯಾವುದೇ ರೀತಿಯ ಮುಲಾಜಿಲ್ಲದೇ ಕೂಡಲೇ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ರಾಜ್ಯದಾದ್ಯಂತ ಮನೆಮನೆಗೆ ಪೊಲೀಸ್‌ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು‌. ಸಾರ್ವಜನಿಕರಿಗೆ ತೊಂದರೆ ಇದ್ದರೆ, ಪೊಲೀಸರ ಸಹಾಯ ಬೇಕಿದ್ದರೆ ಆಲಿಸಲಿದ್ದಾರೆ.

ಪೊಲೀಸರು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು. ಪಾಲಕರ ಸಭೆಗಳಲ್ಲಿ ಪೊಲೀಸರು ಭಾಗವಹಿಸಬೇಕು. ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮ, ಟ್ರಾಫಿಕ್ ನಿಯಮಗಳು ಸೇರಿದಂತೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!