ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ ನಗರ ಬಂದ್ ಗೆ ಕರೆ ನೀಡಲಾಗಿದೆ.
ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ
ವಿವಿಧ ದಲಿತಪರ ಸಂಘಟನೆಗಳಿಂದ ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಬೆಂಬಲ ಸೂಚಿಸಿದೆ. ರೋಣಾ ಶಾಸಕ ಜೆ.ಎಸ್. ಪಾಟೀಲ್ ಬಂದ್ ಬೆಂಬಲಿಸಿ ಪತ್ರ ಬರೆದಿದ್ದಾರೆ. ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು ಕೂಡ ಗದಗ -ಬೆಟಗೇರಿ ಅವಳಿ ನಗರ ಬಂದ್ ಗೆ ಬೆಂಬಲ ನೀಡಿವೆ.
ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸುವಂತೆ ಕೋರಲಾಗಿದೆ. ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.