ಶಿವಮೊಗ್ಗ : ಬಂಗಾರಪ್ಪ ಬಡಾವಣೆಯಲ್ಲಿ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ ಪಾರ್ಕ್ ನಲ್ಲಿ ಗಣೇಶನ ಮೂರ್ತಿ ಹಾಗೂ ನಾಗನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು.ಆದರೆ ನಿನ್ನೆ ಸಂಜೆ ಇಬ್ಬರು ಅನ್ಯಕೋಮಿ ಯುವಕರು ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದರು.
ಅದರಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಅದರಂತೆ ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.