ಬೆಂಗಳೂರು : ಗಣಪ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಜಾಂಡಿಸ್ ನಿಂದ ಬಳಲುತ್ತಿದ್ದ ಸಂತೋಷ್ ಅವರ ಸ್ಥಿತಿ ಗಂಭೀರವಾಗಿತ್ತು, ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕರಿಯ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ನಟ ಸಂತೋಷ್ ಜಾಡಿಸ್ ನಿಂದ ಬಳಲುತ್ತಿದ್ದರು. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಸಂತೋಷ್ ಬಾಲರಾಜ್ ಕರಿಯ-2, ಕೆಂಪ, ಗಣಪ, ಬರ್ಕ್ಲಿ, ಸತ್ಯಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ.




