ಶಹಾಪುರ: -ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರ ವಿರುದ್ಧ ಅಹಿಂಸಾ ಚಳುವಳಿ ಮೂಲಕ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ದೇಶಪ್ರೇಮಿ ಎಂದು ಶಾಲೆಯ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ಪುರಾಣಿಕ ಹೇಳಿದರು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಅಂಗವಾಗಿ ನಗರದ ಹೃದಯ ಭಾಗದಲ್ಲಿರುವ ಲಿಟಲ್ ವಿಂಗ್ಸ್ ಪ್ರೀ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿಯವರ ಪ್ರೇರಣೆಯಿಂದ ಲಾಲ್ ಬಹದ್ದೂರ್ ಶಾಸ್ತ್ರಿಯವರು ಅವರು ಅತಿ ಚಿಕ್ಕ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ ಮಹಾನ್ ನಾಯಕ ಎಂದರು ದೇಶಕ್ಕೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸೇವೆ ಮತ್ತು ಕೊಡುಗೆ ಅಪಾರವಾದದ್ದು ನಾವೆಲ್ಲರೂ ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಮತ್ತು ಸ್ವಚ್ಛತೆಗೆ ಪ್ರತಿಯೊಬ್ಬರು ಪಣತೊಡಬೇಕು ಎಂದು ಶಾಲೆಯ ಮುಖ್ಯ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮಿ ಪುರಾಣಿಕ ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರಾದ ಅಪೂರ್ವ ಮೇಡಂ, ನಾಜಮಿನ್ ಮೇಡಂ, ಲಕ್ಷ್ಮಿ ಮೇಡಂ, ಜೆನ್ನಿ ಮೇಡಂ, ಶರಣಮ್ಮ ಮೇಡಂ, ಮಾಣಿಕ್ಯಮ್ಮ ಮೇಡಂ ಇದ್ದರು ವಿದ್ಯಾರ್ಥಿಗಳಿಂದ ಹಲವಾರು ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.