ಸೇಡಂ: ತಾಲೂಕಿನ ಲಿಂಗಂಪಲ್ಲಿ ಗ್ರಾಮದಲ್ಲಿ ಹೊಸಕೇರಿ ಹತ್ತಿರ ಹಾಗೂ ಗ್ರಾಮದ ಹಲವು ಕಡೆ ಸರಿ ಸುಮಾರು ಇಪ್ಪತ್ತು ದಿನಗಳಿಂದ ನೀರು ಬಾರದೆ ಜನರಿಗೆ ತುಂಬಾ ತೊಂದರೆ ಉಂಟಾಗಿದೆ ಎಂದು ಗ್ರಾಮದ ಮುಖಂಡರಾದ ಜಯಸ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನೇಕ ಬಾರಿ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಮನವಿ ಮಾಡಿದರು ಇತ್ತಕಡೆ ಗಮನ ಹರಿಸದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಸಮಸ್ಯೆ ಪರಿಹಾರ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ವರದಿ ವೆಂಕಟಪ್ಪ ಕೆ ಸುಗ್ಗಾಲ್




