Ad imageAd image

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋಲು : ಗೀತಾ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ

Bharath Vaibhav
WhatsApp Group Join Now
Telegram Group Join Now

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ.

ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ನಡೆಸಿದ್ದರು. ಫಲಿತಾಂಶದಿಂದಾಗಿ ಅಭಿಮಾನಿಗಳಿಗೆ ಬೇಸರವಾಗಿದ್ದು, ಫಲಿತಾಂಶದ ಕುರಿತಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಫಲಿತಾಂಶ ನಮ್ಮ ಕಡೆ ಆಗದಿರಬಹುದು. ಆದರೆ, ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ಸದಾ ಕೃತಜ್ಞರಾಗಿರುತ್ತೇವೆ.

ಮತದಾರನ ಈ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗೆ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ.

ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!