
ನವದೆಹಲಿ: ಚುನಾವಣಾ ಆಯೋಗ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ, ಅದನ್ನು ಬಿಟ್ಟು ಬಿಹಾರದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಮೂಹಿಕವಾಗಿ ಮತದಾರರನ್ನು ಹೊರಗಿಟ್ಟರೆ ನ್ಯಾಯಾಲಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಎಚ್ಚರಿಸಿದೆ.
ಬಿಹಾರದಲ್ಲಿ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸಮಯ ನಿಗದಿಪಡಿಸಿರುವ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಆಗಸ್ಟ್ 12 ಮತ್ತು 13 ರಂದು ರಂದು ವಿಚಾರಣೆಗೆ ಪಟ್ಟಿ ಮಾಡಿದೆ.




