ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್ ರೂಂ ಬಾಗಿಲು ತೆರೆದಿದ್ದಾರೆ. ತಕ್ಷಣ ಅಶನಂ ನನ್ನು ಬಿಎಲ್ಇಡಿ ಆಸ್ಪತ್ರೆಗೆ ಕುಟುಂಬಸ್ಥರು ಸ್ಥಳಾಂತರ ಮಾಡಿದ್ದಾರೆ. ಆದರೆ ಅಶನಂ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಿಎಲ್ಇಡಿ ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಅಶನಂ ಆತ್ಮಹತ್ಯೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, DySP ಬಸವರಾಜ್ ಯಲಿಗಾರ್, ಸಿಪಿಐ ಮಲ್ಲಯ್ಯ ಮಠಪತಿ, ಎಪಿಎಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.