ರಾಯಬಾಗ: ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅವರು ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಹೊರ ವಲಯದಲ್ಲಿ ಘಟಪ್ರಭಾ ಕೆನಾಲ್ ವೀಕ್ಷಣೆ ಮಾಡಿ ನೀರಿನ ಹರಿವಿನ ಪರಿಶೀಲನೆ ನಡೆಸಿದರು.

ಕುಡಿಯುವ ನೀರು ಉದ್ದೇಶದಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ಅಂತಿಮ ಹಂತದವರೆಗೂ ನೀರು ತಲುಪಿಸಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಾವಿರಾರು ಜನರ ಉಪಸ್ಥಿತಿಯಲ್ಲಿ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿ ಅವರು ಜೊತೆಗಿದ್ದರು.
ವರದಿ: ರಾಜು ಮುಂಡೆ




