ಹಾಸನ: ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿಯ ಮೇಲೆ ಅದೇ ಶಾಲೆಯಲ್ಲಿ ವಾಹನ ಚಾಲಕನಾಗಿದ್ದ ರಂಜಿತ್ ಎಂಬಾತ ೮ ತಿಂಗಳಿನಿಂದ ಲೈಂಗಿಕ ದರ‍್ಜನ್ಯವೆಸಗಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿಯೊಬ್ಬಳಿಗೆ ನಿತ್ಯ ಚಾಕೋಲೆಟ್ ನೀಡಿ ಆಕೆಯ ಮೇಲೆ ಲೈಂಗಿಕ ದರ‍್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಯನ್ನ ಚನ್ನರಾಯಪಟ್ಟಣ ನಗರಠಾಣೆಯ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ, ನ್ಯಾಯಾಂಗ ಬಂಧನಕ್ಕೂ ಒಪ್ಪಿಸಿದ್ದಾರೆ. ಇನ್ನು ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹಾಸನ ಡಿಹೆಚ್ಒ ಅನಿಲ್ ತಿಳಿಸಿದ್ದಾರೆ.
ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿ ಹುಡುಗಿ !!




