ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೀದಿ ನಾಯಿ ದಾಳಿಗೆ ಇದೀಗ ಬಾಲಕಿ ಒಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ನಾಯಿ ಕಚ್ಚಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಸಾವನಪ್ಪಿದ್ದಾಳೆ.
ಕಳೆದ ಡಿಸೆಂಬರ್ 27ರಂದು ಬಾಗಲಕೋಟೆ ನಗರದ ನವನಗರದಲ್ಲಿ ಅಲೈನ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು.
ಕಣ್ಣು ಮೂಗು ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಅಲೈನ ಸಾವನ್ನಪ್ಪಿದ್ದಾಳೆ.
ಬಾಲಕಿ ಅಲೈನಾ ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ಬಾಲಕಿ ಮೇಲೆ ಎರಗಿತ್ತು. ಪರಿಣಾಮ ಆಕೆಯ ಕಣ್ಣು, ಮುಖ, ಮೂಗು, ಮುಖಕ್ಕೆ ಗಂಭೀರ ಗಾಯಗಳಾಗಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬಾಲಕಿ ಮೃತಪಟ್ಟಿದ್ದಾಳೆ.




