Join The Telegram | Join The WhatsApp |
ಪಣಜಿ: ತಮ್ಮ ಸರ್ಕಾರವು ಕಾನೂನು, ತಾಂತ್ರಿಕ ಮತ್ತು ರಾಜಕೀಯ ರಂಗಗಳಲ್ಲಿ ಪ್ರಯತ್ನಗಳನ್ನು ಮಾಡುತ್ತಿದ್ದು ಗೋವಾ ಮಹದಾಯಿ ನದಿ ನೀರಿನ ಹೋರಾಟವನ್ನು ಗೆಲ್ಲುತ್ತದೆ ಎಂದು ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಮಹಾದಾಯಿ ನದಿಯ ಉಪನದಿಗಳಾದ ಕಳಸಾ ಮತ್ತು ಬಂಡೂರಿ ಮೇಲೆ ಕರ್ನಾಟಕವು ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಮಹದಾಯಿ ನೀರನ್ನು ತಿರುಗಿಸುವ ವಿಚಾರದಲ್ಲಿ ಗೋವಾ ಮತ್ತು ಕರ್ನಾಟಕವು ವಿವಾದದಲ್ಲಿದೆ.
ಎರಡು ಅಣೆಕಟ್ಟುಗಳ ನಿರ್ಮಾಣಕ್ಕೆ ಕರ್ನಾಟಕ ಸಲ್ಲಿಸಿದ್ದ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ ಇತ್ತೀಚೆಗೆ ಅನುಮೋದನೆ ನೀಡಿದ್ದು, ಇದಕ್ಕೆ ಗೋವಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
ಉತ್ತರ ಗೋವಾದ ಕೆಳಭಾಗದಲ್ಲಿರುವ ಮಹದಾಯಿ ವನ್ಯಜೀವಿ ಅಭಯಾರಣ್ಯದ ಮೂಲಕ ಕರ್ನಾಟಕವು ಮಹದಾಯಿ ನದಿಯಿಂದ ನೀರನ್ನು ತಿರುಗಿಸಲು ಸಾಧ್ಯವಿಲ್ಲ ಎಂದು ಗೋವಾ ಸರ್ಕಾರ ವಾದಿಸಿದೆ.
ಯಾರು ಏನೇ ಹೇಳಲಿ ನಮ್ಮ ನಿರ್ಧಾರದಲ್ಲಿ ನಾವು ದೃಢವಾಗಿರುತ್ತೇವೆ. ಮಹದಾಯಿಗಾಗಿ ಏನೇನು ಮಾಡಬೇಕೋ ಅದನ್ನು ಕಾನೂನಾತ್ಮಕವಾಗಿ, ತಾಂತ್ರಿಕವಾಗಿ, ರಾಜಕೀಯವಾಗಿ ಮಾಡುತ್ತಿದ್ದೇವೆ. ನಾವು ಏನು ಬೇಕಾದರೂ ಮಾಡುತ್ತೇವೆ ಮತ್ತು ನಾವು ಹೋರಾಟ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಸಾವಂತ್ ಮಂಗಳವಾರ ಹೇಳಿದ್ದಾರೆ.
Join The Telegram | Join The WhatsApp |