ಪಣಜಿ : ಗೋವಾದ ನೈಟ್ ಕ್ಲಬ್ ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಟ್ ಕ್ಲಬ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ವ್ಯವಸ್ಥಾಪಕರನ್ನು ಈಗಾಗಲೇ ಬಂಧಿಸಲಾಗಿದೆ.
ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ.ಗೋವಾದ ಅತ್ಯಂತ ಜನಪ್ರಿಯ ಬೀಚ್ ಗಳಲ್ಲಿ ಒಂದಾದ ಬಾಗಾದಲ್ಲಿರುವ ಬಿರ್ಚ್ ಬೈ ರೋಮಿಯೋ ಲೇನ್ ಕ್ಲಬ್ನಲ್ಲಿ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದೆ, ಇದು ರಾಜ್ಯ ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದ ಕ್ಲಬ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಪರಾಧಿ ನರಹತ್ಯೆಗೆ ಎಫ್‌ಐಆರ್ ದಾಖಲಿಸಲಾಗಿದೆ.




