ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕುಂದರಗಿ ಗ್ರಾಮ ಪೂಜಾ ಎಂಬುವರು ಡಿಸೆಂಬರ್.24ರಂದು ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯಾಹ್ನ ಗಂಡು ಮಗುವಿಗೆ ಪೂಜಾ ಜನ್ಮ ನೀಡಿದ್ದರು. ಆ ಬಳಿಕ ಬಾಣಂತಿ ಪೂಜಾ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪೂಜಾ ಹೆರಿಗೆಯ ನಂತ್ರ ಫಿಟ್ಸ್ ಬಂದು ಸಾವನ್ನಪ್ಪಿರುವುದಾಗಿ ವೈದ್ಯರು ಕುಟುಂಬಸ್ಥರಿಗೆ ತಿಳಿಸಿ, ಪೋಸ್ಟ್ ಮಾರ್ಟಮ್ ನಡೆಸದೇ ತರಾತುರಿಯಲ್ಲಿ ಕುಟುಂಬಸ್ಥರಿಗೆ ಶವ ಕೊಟ್ಟು ಕಳುಹಿಸಿದ್ದಾಗಿ ತಿಳಿದು ಬಂದಿದೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.