Ad imageAd image

ಕೆಎಎಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ 

Bharath Vaibhav
ಕೆಎಎಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.

ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!